ಅಭಿಪ್ರಾಯ / ಸಲಹೆಗಳು

ಭದ್ರಾ ಮೇಲ್ದಂಡೆ ಯೋಜನೆ

ಭದ್ರಾ ಮೇಲ್ದಂಡೆ ಯೋಜನೆಯಡಿ ಒಟ್ಟು 29.90 ಟಿ.ಎಂ.ಸಿ. ನೀರಿನ ಬಳಕೆಯೊಂದಿಗೆ ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಹಾಗೂ ತುಮಕೂರು ಜಿಲ್ಲೆಗಳ 5,57,022 ಎಕರೆ (2,25,515 ಹೆಕ್ಟೇರ್) ಭೂಪ್ರದೇಶಕ್ಕೆ ನೀರಾವರಿ ಕಲ್ಪಿಸಲು ಮತ್ತು ಇದೇ ಜಿಲ್ಲೆಗಳ 367 ಸಣ್ಣ ನೀರಾವರಿ ಕೆರೆಗಳನ್ನು ಅವುಗಳ ಸಾಮಥ್ರ್ಯದ ಶೇ. 50 ರಷ್ಟನ್ನು ತುಂಬಿಸಲು ಉದ್ದೇಶಿಸಲಾಗಿದೆ.

 

ಸದರಿ ಯೋಜನೆಗೆ ಸರ್ಕಾರದ ಆದೇಶ ಸಂಖ್ಯೆ: WRD 166 VBYE 2020 (ಭಾ-1) ಬೆಂಗಳೂರು ದಿನಾಂಕ 16.12.2020 ರಡಿ ರೂ. 21473.67 ಕೋಟಿಗಳ ಪರಿಷ್ಕೃತ ಯೋಜನಾ ವರದಿಗೆ ಆಡಳಿತಾತ್ಮಕ ಅನುಮೋದನೆಯನ್ನು ನೀಡಲಾಗಿದೆ.

 

ಸದರಿ ಯೋಜನೆಯನ್ನು ಎರಡು ಹಂತದಲ್ಲಿ ಕೈಗೊಳ್ಳಲಾಗಿದ್ದು, ಕಾಮಗಾರಿಗಳು ವಿವಿಧ ಹಂತದ  ಪ್ರಗತಿಯಲ್ಲಿವೆ.

 

ಮೊದಲನೇ ಹಂತ

 • ಪ್ಯಾಕೇಜ್-I:ತುಂಗಾ ನದಿಯಿಂದ 17.40 ಟಿ.ಎಂ.ಸಿ ನೀರನ್ನು ಎರಡು ಹಂತಗಳಲ್ಲಿ ಲಿಫ್ಟ್ ಮಾಡಿ ಭದ್ರಾ ಜಲಾಶಯಕ್ಕೆ ನೀರು ಹರಿಸುವ, ಕಾಮಗಾರಿ ಪ್ರಗತಿಯಲ್ಲಿದೆ.

 

 • ಪ್ಯಾಕೇಜ್-II:ಭದ್ರಾ ಜಲಾಶಯದಿಂದ 29.90 ಟಿ.ಎಂ.ಸಿ. ನೀರನ್ನು ಎರಡು ಹಂತಗಳಲ್ಲಿ ಲಿಫ್ಟ್ ಮಾಡಿ ಅಜ್ಜಂಪುರ ಸುರಂಗದವರೆಗೆ ಕೊಂಡೊಯ್ಯುವ, ಕಾಮಗಾರಿಗಳು ಭೌತಿಕವಾಗಿ ಪೂರ್ಣಗೊಂಡಿರುತ್ತವೆ.

 

 • ಪ್ಯಾಕೇಜ್-III:ಅಜ್ಜ೦ಪುರ ಸುರಂಗ ಮಾರ್ಗದ ಮೂಲಕ ಚಿತ್ರದುರ್ಗ ಶಾಖಾ ಕಾಲುವೆ ಹಾಗೂ ತುಮಕೂರು ಶಾಖಾ ಕಾಲುವೆಗಳಿಗೆ ನೀರು ಹರಿಸುವ, ಕಾಮಗಾರಿಗಳು ಭೌತಿಕವಾಗಿ ಪೂರ್ಣಗೊಂಡಿರುತ್ತವೆ.

ಎರಡನೇ ಹಂತ

 • ತರೀಕೆರೆ ಏತ ನೀರಾವರಿ: ತರೀಕೆರೆ ತಾಲ್ಲೂಕಿನ 20,150 ಹೇಕ್ಟೇರ್ ಕ್ಷೇತ್ರಕ್ಕೆ ಹನಿ ನೀರಾವರಿ ಮೂಲಕ ನೀರನ್ನು ಒದಗಿಸುವುದು ಹಾಗೂ 79 ಕೆರೆಗಳನ್ನು ತುಂಬಿಸುವುದು. ಪ್ರಸ್ತುತ ಕಾಮಗಾರಿಗಳನ್ನು 02 ಪ್ಯಾಕೇಜ್‌ಗಳನ್ನಾಗಿ ಕೈಗೆತ್ತಿಕೊಳ್ಳಲಾಗಿದ್ದು, ಕಾಮಗಾರಿಗಳು ಪ್ರಗತಿಯಲ್ಲಿರುತ್ತವೆ.

 

 • ಚಿತ್ರದುರ್ಗ ಶಾಖಾ ಕಾಲುವೆ: 134.597 ಕಿ.ಮೀ ಉದ್ದದ ಕಾಲುವೆ  ಮುಖಾಂತರ ಚಿಕ್ಕಮಗಳೂರು ಜಿಲ್ಲೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ 1,07,265 ಹೆಕ್ಟೇರ್ ಕ್ಷೇತ್ರಕ್ಕೆ ಹನಿ ನೀರಾವರಿ ಕಲ್ಪಿಸಿ 157 ಕೆರೆಗಳಿಗೆ ನೀರನ್ನು ತುಂಬಿಸುವುದು. ಪ್ರಸ್ತುತ ಕಾಮಗಾರಿಗಳನ್ನು 12 ಪ್ಯಾಕೇಜ್‌ಗಳನ್ನಾಗಿ ಕೈಗೆತ್ತಿಕೊಳ್ಳಲಾಗಿದ್ದು, ಕಾಮಗಾರಿಗಳು ಪ್ರಗತಿಯಲ್ಲಿರುತ್ತವೆ.

 

 • ತುಮಕೂರು ಶಾಖಾ ಕಾಲುವೆ: 159.684 ಕಿ.ಮೀ. ಉದ್ದದ ಕಾಲುವೆ ಮುಖಾಂತರ ಚಿಕ್ಕಮಗಳೂರು, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ 84,900 ಹೆಕ್ಟೇರ್ ಕ್ಷೇತ್ರಕ್ಕೆ ಹನಿ ನೀರಾವರಿ ಕಲ್ಪಿಸಿ 131 ಕೆರೆಗಳಿಗೆ ನೀರನ್ನು ತುಂಬಿಸುವುದು. ಪ್ರಸ್ತುತ ಕಾಮಗಾರಿಗಳನ್ನು 09 ಪ್ಯಾಕೇಜ್‌ಗಳನ್ನಾಗಿ ಕೈಗೆತ್ತಿಕೊಳ್ಳಲಾಗಿದ್ದು, ಕಾಮಗಾರಿಗಳು ಪ್ರಗತಿಯಲ್ಲಿರುತ್ತವೆ.

 

 • ಹನಿ ನೀರಾವರಿ: ಚಿತ್ರದುರ್ಗ ಶಾಖಾ ಕಾಲುವೆಯ 40749 ಹೆ. ಪ್ರದೇಶಕ್ಕೆ, ತುಮಕೂರು ಶಾಖಾ ಕಾಲುವೆಯಡಿ 27590 ಹೆ. ಪ್ರದೇಶಕ್ಕೆ ಮತ್ತು ಜಗಳೂರು ಶಾಖಾ ಕಾಲುವೆಯಡಿ 24123 ಹೆ. ಪ್ರದೇಶಕ್ಕೆ ಹನಿ ನೀರವಾರಿ ಸೌಲಭ್ಯ ಕಲ್ಪಿಸುವ ಮತ್ತು ಕೆರೆ ತುಂಬಿಸುವ ಕಾಮಗಾರಿಗಳನ್ನು 07 ಪ್ಯಾಕೇಜ್‌ಗಳನ್ನಾಗಿ ಕೈಗೆತ್ತಿಕೊಳ್ಳಲಾಗಿದ್ದು, ಪ್ರಸ್ತುತ ಕಾಮಗಾರಿಗಳು ಪ್ರಗತಿಯಲ್ಲಿರುತ್ತವೆ.

 

 • ಕೆರೆ ತುಂಬಿಸುವ ಕಾಮಗಾರಿಗಳು: ಚಿತ್ರದುರ್ಗ ಶಾಖಾ ಕಾಲುವೆಯಿಂದ ಕವಲೊಡೆಯುವ ಹೊಳಲ್ಕೆರೆ, ಪಾವಗಡ, ಚಳ್ಳಕೆರೆ ಮತ್ತು ಮೊಳಕಾಲ್ಮೂರು ತಾಲ್ಲೂಕಿನ ಕೆರೆಗಳನ್ನು ತುಂಬಿಸುವ ಹಾಗೂ ತುಮಕೂರು ಶಾಖಾ ಕಾಲುವೆಯಿಂದ ಕವಲೊಡೆಯುವ ಶಿರಾ, ಹಿರಿಯೂರು ಮತ್ತು ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಕೆರೆಗಳನ್ನು ತುಂಬಿಸುವ ಫಿಡರ್ ಕಾಮಗಾರಿಗಳನ್ನು ೦೯ ಪ್ಯಾಕೇಜ್‌ಗಳನ್ನಾಗಿ ಕೈಗೆತ್ತಿಕೊಳ್ಳಲಾಗಿದ್ದು, ಕಾಮಗಾರಿಗಳು ಪ್ರಗತಿಯಲ್ಲಿರುತ್ತವೆ.

 

 

ಇತ್ತೀಚಿನ ನವೀಕರಣ​ : 20-01-2023 04:57 PM ಅನುಮೋದಕರು: Adminಹಕ್ಕುತ್ಯಾಗ

ಈ ಪುಟವು ಸರ್ಕಾರಿ ಸಚಿವಾಲಯ/ ಇಲಾಖೆ/ ಸಂಸ್ಥೆಗಳಿಗೂ ಲಿಂಕುಗಳನ್ನು ಕಲ್ಪಿಸುತ್ತದೆ ಎಂಬುದನ್ನು ದಯವಿಟ್ಟು ಗಮನಿಸಿ. ಈ ವೆಬ್ ಸೈಟುಗಳ ವಿಷಯಗಳು ಆಯಾ ಸಂಸ್ಥೆಗಳ ಸ್ವತ್ತೇ ಆಗಿದ್ದು, ಯಾವುದೇ ಹೆಚ್ಚಿನ ಮಾಹಿತಿ ಅಥವಾ ಸಲಹೆಗಾಗಿ ಅವರನ್ನೇ ಸಂಪರ್ಕಿಸುವುದು

ಜಾಲತಾಣ ನೀತಿಗಳು

 • ಹಕ್ಕುಸ್ವಾಮ್ಯ ನೀತಿ
 • ಬಾಹ್ಯಜಾಲತಾಣ ಸಂಪರ್ಕ ನೀತಿ
 • ಭದ್ರತಾ ನೀತಿ
 • ಕರಾರುಗಳು ಮತ್ತು ಷರತ್ತುಗಳು

ಸಂದರ್ಶಕರು

 • ಇತ್ತೀಚಿನ ನವೀಕರಣ​ :
 • ಸಂದರ್ಶಕರು :
 • ಆವೃತ್ತಿ :
ವಿಷಯದ ಮಾಲೀಕತ್ವ ಮತ್ತು ನಿರ್ವಹಣೆ : ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತ
ವಿನ್ಯಾಸ, ಅಭಿವೃದ್ಧಿ ಮತ್ತು ಪ್ರಕಟಣೆ : ಇ-ಆಡಳಿತ ಕೇಂದ್ರ , ಕರ್ನಾಟಕ ಸರ್ಕಾರ © 2023, ಎಲ್ಲಾ ಹಕ್ಕುಗಳೂ ಕಾಯ್ದಿರಿಸಿವೆ

ಜಾಲತಾಣದ ಉತ್ತಮ ನೋಟಕ್ಕಾಗಿ ಕ್ರೋಮ್‌ v-87.0.4280.141, ಮೈಕ್ರೋಸಾಫ್ಟ್‌ ಎಡ್ಜ್‌ v-87.0.664.75, ಫೈರ್‌ಫಾಕ್ಸ್‌ v-83.0 ಬ್ರೌಸರ್‌ಗಳನ್ನು ಬಳಸಿ. ಸ್ಥಿರಚಿತ್ರಣ : 1280x800 to 1920x1080